ಹೈದರಾಬಾದ್: ಪ್ರೆಸ್‌ಮೀಟ್‌ನಲ್ಲಿ ವಿಜಯ್ ದೇವರಕೊಂಡ ಅವರ ಬೋಲ್ಡ್ ಪೋಸ್ ವೈರಲ್ ಆಗಿದೆ. ಪ್ರೆಸ್ ಮೀಟ್ ವೇಳೆ ವಿಜಯ್ ಮುಂದೆ ಇದ್ದ ಟೇಬಲ್ ಮೇಲೆ ಕಾಲು ಇಟ್ಟು ಕುಳಿತಿದ್ದರು. ಲಿಗರ್ ಸ್ಟಾರ್ ಈ ರೀತಿ ಮಾಡುವಾಗ ಒಂದು ಕ್ಷಣವೂ ಯೋಚಿಸದೆ ಹೀಗೆ ಮಾಡಿದ್ದಾರೆ.
ಟಾಲಿವುಡ್ ಸೆನ್ಸೇಷನ್ ಸ್ಟಾರ್ ವಿಜಯ್ ದೇವರಕೊಂಡ ಸದ್ಯ ಲಿಗರ್ ಸಿನಿಮಾದ ಬಿಡುಗಡೆಯ ಬ್ಯುಸಿಯಲ್ಲಿದ್ದಾರೆ. ಲಿಗರ್ ಸಿನಿಮಾ ಪ್ಯಾನ್ ಇಂಡಿಯಾ ಪಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ವಿಜಯ್ ದೇವರಕೊಂಡ ದೇಶದಾದ್ಯಂತ ಪ್ರಚಾರ ಕಾರ್ಯ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಬಾಲಿವುಡ್ ಸ್ಟಾರ್ ಅನನ್ಯಾ ಪಾಂಡೆ ಕಾಣಿಸಿಕೊಂಡಿದ್ದಾರೆ. ಇಬ್ಬರ ಸಿನಿಮಾ ಪ್ರಚಾರದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಹೈದರಾಬಾದ್ ನಲ್ಲಿ ಪ್ರೆಸ್‌ಮೀಟ್ ಹಮ್ಮಿಕೊಂಡಿತ್ತು.
PublicNext
22/08/2022 08:03 pm