ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದ್ವೆಯಾಗಿ 4 ತಿಂಗ್ಳು; ಅವಳಿ ಮಕ್ಕಳಿಗೆ ಅಮ್ಮನಾದ ನಯನತಾರಾ!

ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ ಮೂರ್ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದಾರೆ. ಮದುವೆ ಆಗಿ ನಾಲ್ಕೇ ತಿಂಗಳಿಗೆ ತಾವು ಜವಳಿ ಮಕ್ಕಳ ಪಾಲಕರಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎರಡೂ ಮಕ್ಕಳ ಕಾಲುಗಳ ಫೋಟೋವನ್ನು ಅಪ್ ಲೋಡ್ ಮಾಡಿ, ಟ್ರೋಲ್ ಗೆ ಗುರಿಯಾಗಿದ್ದಾರೆ.

ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳಿಗೆ ತಾವು ತಾಯಿ ಆಗಿದ್ದೇನೆ ಎಂದು ನಯನತಾರಾ ಘೋಷಿಸುತ್ತಿದ್ದಂತೆಯೇ ಶುಭ ಹಾರೈಸಿದ್ದವರಿಗಿಂತ ನೆಗೆಟಿವ್ ಕಾಮೆಂಟ್ ಮಾಡಿದವರೇ ಹೆಚ್ಚಾಗಿದ್ದಾರೆ. ಕೆಲವರು ತಾಯ್ತನದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ಅನೇಕರು ಮನೆಗೆ ಬರುತ್ತಿರುವ ಹೊಸ ಅತಿಥಿಗೆ ಶುಭ ಹಾರೈಸಿದ್ದಾರೆ.

ನಯನತಾರ ಅವಳಿ ಮಕ್ಕಳ ತಾಯಿ ಎಂದು ಇನ್ಸ್ಟಾದಲ್ಲಿ ದಂಪತಿ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅರೇ, ಮದುವೆಯಾದ 4 ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವವರಿಗೆ ಉತ್ತರವನ್ನೂ ಕೊಟ್ಟಿರುವ ದಂಪತಿ, ಬಾಡಿಗೆ ತಾಯಿ ಮೂಲಕ ಅವಳಿ ಮಕ್ಕಳ ಪಾಲಕರಾಗಿದ್ದಾರೆ ಈ ಜೋಡಿ.

ಮದುವೆಗೂ ಮುನ್ನ ವಿಘ್ನೇಶ್ ಶಿವನ್ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಸುಳಿವು ನೀಡಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅದರಂತೆ ಕಳೆದ ಜೂನ್ ನಲ್ಲಿ ಆಪ್ತರ ಸಮ್ಮುಖದಲ್ಲಿ ಇವರು ಹಸೆಮಣೆ ಏರಿದ್ದರು. ತಾವಿಷ್ಟಪಟ್ಟ ಗಣ್ಯರು ಈ ಮದುವೆಗೆ ಸಾಕ್ಷಿ ಆಗಿದ್ದರು.

ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿಯೂ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಅದು ಕೂಡ ಇದೀಗ ನಿಜವಾಗಿದೆ. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ದಂಪತಿ ಆಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.

Edited By : Abhishek Kamoji
PublicNext

PublicNext

10/10/2022 09:33 pm

Cinque Terre

58.78 K

Cinque Terre

4