ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಂಕರ ಭಾರತಿ ಮಠದಲ್ಲಿ ರಾಷ್ಟ್ರಿಯ ನಾಡಹಬ್ಬಗಳ ಆಚರಣಾ ಸಮಿತಿ ಹಾಗೂ ಪಕ್ಷಾತೀತ ರೈತ ಪರ ಹೋರಾಟ ವೇದಿಕೆ, ಮತ್ತು ವಿವಿಧ ಸಂಘಟನೆ ಸಹಯೋಗದಲ್ಲಿ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನ ಏರ್ಫಡಿಸಲಾಗಿತ್ತು.
ವೇಷ ಭೂಷಣ, ರಂಗೋಲಿ, ಭಾಷಣ, ಪ್ರಬಂಧ, ದೇಶಭಕ್ತಿಗೀತೆಗಳು ಸ್ಲೋ ಸೈಕಲ್, ಸ್ಪರ್ಧೆ ಏರ್ಪಡಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಬಾಗವಹಿಸಿದ್ದರು. ಅತಿಥಿಗಳಿಗೆ ರಾಷ್ಟ್ರಧ್ವಜ ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸ್ವತಂತ್ರ ಮಹೋತ್ಸವವನ್ನು ದೇಶದಲ್ಲಿ ನಾವೆಲ್ಲರೂ ಸಂಭ್ರಮಿಸೋಣ ಇಂದಿನ ಮಕ್ಕಳು ನಾಳೆ ದೇಶದ ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಮಕ್ಕಳಲ್ಲಿ ದೇಶ ಭಕ್ತಿಯನ್ನು ತುಂಬುವ ಕೆಲಸವಾಗಬೇಕು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರಿಗೆ ನಾವು ಶ್ರಮಿಸಿಕೊಳ್ಳುಬೇಕು ಮಕ್ಕಳಲ್ಲಿ ಹಲವಾರು ರೀತಿಯ ಪ್ರತಿಭೆ ಗಳು ಇರುತ್ತವೆ ಆ ಪ್ರತಿಭೆಗಳನ್ನು ತೋರಿಸಲು ಇಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷಾತೀತ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಅಭಿಪ್ರಾಯ ವ್ಯಕ್ತಪಡಿಸಿದರು.
PublicNext
08/08/2022 02:24 pm