ಹೊಸದಿಲ್ಲಿ: 2021ರ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಭಾರತವೂ ಸೇರಿದಂತೆ ಇಡೀ ಜಗತ್ತಿನಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ಜಗತ್ತಿನ ಬಹುತೇಕ ದೇಶಗಳ ರಾಜಧಾನಿಯಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಕಳೆಗಟ್ಟಿದೆ. ಹೊಸ ವರ್ಷ ಬರಮಾಡಿಕೊಳ್ಳಲು ಪ್ರಸಿದ್ಧ ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ಹೊಸ ವರ್ಷಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನ, ಸಂಸತ್ತಿಗೆ ದೀಪಾಲಂಕಾರ ಮಾಡಲಾಗಿದ್ದು, ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ನ್ಯೂ ಇಯರ್ ಸೆಲೆಬ್ರೆಷನ್‌ಗೆ ವರುಣನ ಅಡ್ಡಿ..! ಇನ್ನು ಮಹಾರಾಷ್ಟ್ರ ರಾಜಧಾನಿ ಮುಂಬಯಿನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಕೂಡ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ.
PublicNext
31/12/2020 09:39 pm