ಬೆಂಗಳೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವವು ಬುಧವಾರದಿಂದ ಆರಂಭಗೊಳ್ಳುತ್ತಿದ್ದು, ಆಗಷ್ಟ್ 16ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಠದಲ್ಲಿ ನಡೆಯಲಿವೆ. ಈ ಹಿನ್ನಲೆಯಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಅವರು, ಡಾ. ರಾಜ್‌ಕುಮಾರ್ ಅವರು ಹಾಡಿರುವ 'ನೀ ತಂದೆ ನಾ ಕಂದ ಇದು ನಮ್ಮ ಅನುಬಂಧ' ಎಂಬ ಹಾಡಿನ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವಕ್ಕೆ ಶುಭಕೋರಿದ್ದಾರೆ.
PublicNext
12/08/2022 03:48 pm