ಬಿಗ್ ಬಾಸ್ ಓಟಿಟಿ ಶೋ ಶುರುವಾಗುವ ಮೊದಲಿನ ಲೆಕ್ಕಾಚಾರದ ಪ್ರಕಾರ ಸ್ಪರ್ಧಿಗಳ ಪಟ್ಟಿಯಲ್ಲಿ ಕಾಫಿನಾಡು ಚಂದು ಕೂಡ ಇರಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಗ್ ಬಾಸ್ ಗ್ರ್ಯಾಂಡ್ ಲಾಂಚ್ ಬಳಿಕ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಈಗ ಕಾಫಿನಾಡು ಚಂದು ಬಿಗ್ ಬಾಸ್ ಮನೆಗೆ ಬರಲು ಕಸರತ್ತು ಮಾಡ್ತಿದ್ದಾರಂತೆ.
ತಾವು ಕೂಡ ಬಿಗ್ ಬಾಸ್ ಮನೆಗೆ ಹೋಗಬೇಕೆಂದು ಹಲವಾರು ಬಾರಿ ಕಾಫಿನಾಡಿನ ಚಂದು ಹೇಳಿಕೊಂಡಿದ್ದರು. ಕೊನೆಗೆ ಅದು ಕೈಗೂಡಲಿಲ್ಲ. ಆದರೂ ಸುಮ್ಮನೆ ಕೂರದ ಕಾಫಿ ನಾಡಿನ ಚಂದು ಹೊಸದೊಂದು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಹೊಸ ಅಭಿಯಾನವೊಂದನ್ನು ತಾವೇ ಶುರು ಮಾಡಿಕೊಂಡಿದ್ದಾರೆ. ಎಲ್ಲರ ಬಳಿ ತೆರಳಿ ಕಾಫಿನಾಡಿನ ಚಂದು ಅವರನ್ನು ಬಿಗ್‌ಬಾಸ್‌ಗೆ ಕಳುಹಿಸವಂತೆ ಒತ್ತಾಯಿಸುವ ವಿಡಿಯೋ ಮಾಡಿಸಿ ಅಪ್ಲೋಡ್ ಮಾಡಿಸುತ್ತಿದ್ದಾರಂತೆ. ಈ ಬಗ್ಗೆ ಇದೀಗ ಎಲ್ಲೆಲ್ಲೂ ಚರ್ಚೆ ಶುರುವಾಗಿದೆ.
PublicNext
12/08/2022 09:55 pm