ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಖ್ಯಾತ ನಿರ್ಮಾಪಕನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಮಹಾಲಕ್ಷ್ಮೀ

ಚೆನ್ನೈ: ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ, ನಿರೂಪಕಿ ಮಹಾಲಕ್ಷ್ಮೀ ಅವರ ವಿವಾಹವು ಖ್ಯಾತ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ ಅವರೊಂದಿಗೆ ನಿನ್ನೆ (ಗುರುವಾರ) ನಡೆದಿದೆ.

ತಿರುಪತಿಯಲ್ಲಿ ಈ ಮದುವೆ ಕಾರ್ಯ ನಡೆದಿದೆ. ಇಬ್ಬರಿಗೂ ಇದು ಎರಡನೇ ಮದುವೆ. ಈ ಫೋಟೋಗಳನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ನನ್ನ ಜೀವನದಲ್ಲಿ ನಿಮ್ಮನ್ನು ಪಡೆದುಕೊಳ್ಳಲು ನಾನು ತುಂಬಾ ಅದೃಷ್ಟ ಮಾಡಿದ್ದೆ. ನನ್ನ ಜೀವನದಲ್ಲಿ ನೀವು ಪ್ರೀತಿ ತುಂಬಿದ್ದೀರಿ. ಲವ್​ ಯೂ' ಎಂದು ಮಹಾಲಕ್ಷ್ಮೀ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ನಟಿಯ ಆಯ್ಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.

'ಇದು ನಿಜವಾದ ಮದುವೆಯೋ ಅಥವಾ ಧಾರಾವಾಹಿಯ ಮದುವೆಯೋ' ಎಂದು ಕೆಲ ನೆಟ್ಟಿಗರು ಪ್ರಶ್ನಿಸಿದ್ದಾರೆ. ಇನ್ನೂ ಕೆಲವರು 'ನನ್ನ ಬಳಿ ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ' ಎಂದು ಕಮೆಂಟ್ ಮಾಡಿದ್ದಾರೆ.

Edited By : Vijay Kumar
PublicNext

PublicNext

02/09/2022 02:48 pm

Cinque Terre

14.51 K

Cinque Terre

1