", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1737649507-WhatsApp-Image-2025-01-23-at-9.54.55-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿರಹಟ್ಟಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯು ಸುಟ್ಟು ಕರಕಲಾಗಿದೆ. ಅಲ್ಲದೆ ಮನೆಯಲ್ಲಿರುವ ವಸ್ತುಗಳು ಸುಟ್ಟು ಹೋಗಿವೆ ಅದೃಷ್ಟವಶಾತ್ ಯಾವುದೇ ...Read more" } ", "keywords": "Shirahatti, Fire Accident, House Gutted, Family Loss, Karnataka News, Accident Report, Fire Mishap, Property Damage, Rural Karnataka.,Gadag,Accident", "url": "https://publicnext.com/article/nid/Gadag/Accident" }
ಶಿರಹಟ್ಟಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯು ಸುಟ್ಟು ಕರಕಲಾಗಿದೆ. ಅಲ್ಲದೆ ಮನೆಯಲ್ಲಿರುವ ವಸ್ತುಗಳು ಸುಟ್ಟು ಹೋಗಿವೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಟ್ಟಣದ 2ನೇ ವಾರ್ಡ್ ಗೆ ಬರುವ ಹರಿಪುರದ ಶರಣಯ್ಯ ಹೊಸಮಠ ಎಂಬುವವರಿಗೆ ಸೇರಿದ ಮನೆಗೆ ಬೆಂಕಿ ಬಿದ್ದಿದೆ. ಶರಣಯ್ಯ ಕೆಲಸಕ್ಕೆ ಹೋದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ಮನೆಯ ಮಾಲೀಕರು ತಮ್ಮ ಅಳಲನ್ನು ತೋಡಿಕೊಂಡರು.
ಮನೆಗೆ ಬೆಂಕಿ ಹೊತ್ತಿಕೊಂಡು ಇರುವುದನ್ನು ಗಮನಿಸಿದ ನೆರೆಹೊರೆಯವರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವರ್ಗದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ AFSO ಎಸ್ ಬಿ ಶಿಗುಣಸಿ, LF ಸೋಮಶೇಖರ ರಜಪೂತ FD ಮಿಥುನ ಕುಮಾರ FM ರವಿ ಡಿ. ಮುಂತಾದವರು ಉಪಸ್ಥಿತರಿದ್ದರು.
PublicNext
23/01/2025 09:55 pm