ಗದಗ: ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಸಮೀಪ ಹಳ್ಳ ತುಂಬಿ ಹರಿಯುತ್ತಿದೆ. ಈ ಹಳ್ಳದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಟ್ರ್ಯಾಕ್ಟರ್ ಮೂಲಕ ದಿನನಿತ್ಯ ಮರಳು ಸಾಗಿಸಲಾಗುತ್ತಿದೆ. ದಂಧೆಯ ವ್ಯಾಮೋಹಕ್ಕೆ ಒಳಗಾಗಿರುವ ಚಾಲಕರು ಕೂಡ ಪ್ರಾಣ ಪಣಕ್ಕಿಟ್ಟು ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಅಕ್ರಮವಾಗಿ ಮರಳು ದಂಧೆಯೂ ಎಗ್ಗಿಲ್ಲದೇ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ. ನದಿಗಳು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದರು ದಂಧೆಕೋರರು ಮಾತ್ರ ತಮ್ಮ ಪ್ರಾಣವನ್ನು ಲೆಕ್ಕಿಸದೆ ಮರಳು ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಕ್ರಮ ಮರಳು ದಂಧೆಗೆ ಯಾವಾಗ ಬ್ರೇಕ್ ಹಾಕ್ತಾರೆ? ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿದೆ. ಈ ವರ್ಷದಲ್ಲಿ ಸಾಕಷ್ಟು ಮಳೆಯಾಗಿದ್ದರಿಂದ ಎಲ್ಲೆಂದರಲ್ಲಿ ಮಳೆಯ ನೀರು ಹರಿಯುತ್ತಿದೆ. ಇದರಿಂದ ಹರಿದು ಬಂದ ನೀರಿನಲ್ಲಿ ಸಾಕಷ್ಟು ಪ್ರಮಾಣದ ಮರಳು ಶೇಖರಣೆಯಾಗಿದೆ. ಇದರಿಂದ ಅಕ್ರಮ ಮರಳು ದಂಧೆಕೋರರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮರಳು ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ.
PublicNext
19/09/2022 10:46 am