ಗದಗ: ಕೃಷಿ ಹೊಂಡದಲ್ಲಿ ಮುಳುಗಿ ಕುರಿಗಾಹಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದ ಜಮೀನೊಂದರ ಕೃಷಿ ಹೊಂಡದಲ್ಲಿ ನಡೆದಿದೆ.
ಕಾಶಿಲಿಂಗ (22)ಅನ್ನೋ ಮೃತ ಕುರಿಗಾಹಿ ಯುವಕ ನರಗುಂದದ ಕಸಬಾ ಓಣಿಯ ನಿವಾಸಿಯಾಗಿದ್ದಾನೆ. ಕುರಿಗಾಹಿ ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಕೆಸರಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.ಇನ್ನು ಮೃತ ಯುವಕನಿಗಾಗಿ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ. ಈ ಕುರಿತು ಗದಗ ಜಿಲ್ಲೆ ನರಗುಂದ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
09/10/2022 07:34 pm