ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಾನುವಾರುಗಳಿಗೆ ಚರ್ಮಗಂಟು ರೋಗ; ಜಾನುವಾರು ಜಾತ್ರೆ-ಸಾಗಾಣಿಕೆ ನಿಷೇಧ

ಗದಗ: ಜಿಲ್ಲೆಯ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ, ಮುಂಡರಗಿ ತಾಲೂಕಿನ ಜಾನುವಾರುಗಳಿಗೆ ಚರ್ಮಗಂಟು ಕಾಣಿಸಿಕೊಂಡಿದ್ದು, ಮುಂಬರುವ ದಿನಗಳಲ್ಲಿ ಉಲ್ಬಣವಾಗದಂತೆ ರೋಗ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುತ್ತದೆ.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೊಗವನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 22 ರವರೆಗೆ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾನುವಾರು ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ದಂಡಾಧಿಕಾರಿಗಳು ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸುವ ಮೂಲಕ ಆದೇಶಿಸಿ, ಪ್ರಕಟಣೆ ಹೊರಡಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

23/09/2022 06:29 pm

Cinque Terre

18.12 K

Cinque Terre

0

ಸಂಬಂಧಿತ ಸುದ್ದಿ