ಗದಗ:ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ ಬಹದೂರ ಶಾಸ್ತಿ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.ಪ್ಲಾಸ್ಟಿಕ ಬಳಕೆ ನಿಷೇಧ, ಹಸಿ ಕಸ ಒಣ ಕಸ ವಿಂಗಡಣೆ, ಪ್ಲಾಸ್ಟಿಕ ತ್ಯಾಜ್ಯದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.
ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ನಗರ ಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ, ಎಂ.ಸಿ.ಎ. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕರಿಗೌಡರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಜಿ.ಪಂ ಸಿ.ಇ.ಓ ಡಾ.ಸುಶೀಲಾ ಬಿ. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ವೀರಯ್ಯಸ್ವಾಮಿ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
Kshetra Samachara
02/10/2022 11:44 am