ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ರೈತರ ನಿದ್ದೆಗೆಡಿಸಿದ ಚರ್ಮ ಗಂಟು ರೋಗ

ಗದಗ: ಮಳೆ ಹೊಡೆತಕ್ಕೆ ಸಿಕ್ಕಿ ತತ್ತರಿಸಿ ಹೋಗಿರುವ ಅನ್ನದಾತರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹಸು ಮತ್ತು ಎತ್ತುಗಳಲ್ಲಿ ಚರ್ಮ ಗಂಟು ರೋಗ ಕಾಣಿಸಿಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ರೋಗ ಉಲ್ಬಣಗೊಳ್ಳುತ್ತಿದೆ. ಈ ಕಾಯಿಲೆ ರೈತರ ನಿದ್ದೆಗೆಡಿಸಿ ಆತಂಕಕ್ಕೆ ಸಿಲುಕುವಂತೆ ಮಾಡಿದೆ.

ಹೌದು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ರೋಗ ಹರಡುತ್ತಿದೆ. ಇದ್ದರಿಂದ ರೈತರು ಬೆಚ್ಚಿಬಿಳುವಂತೆ ಮಾಡಿದೆ. ಲಕ್ಷ್ಮೇಶ್ವರ ಪಟ್ಟಣದ ಪಶು ಆಸ್ಪತ್ರೆಗೆ ದಾವಿಸಿದರೆ ಆಸ್ಪತ್ರೆಯಲ್ಲಿ ವೈದ್ಯರೆ ಇರುವದಿಲ್ಲ. ಸಿಬ್ಬಂದಿಯವರೆ ಇರುತ್ತಾರೆ ಅವರೆ ದನಕರುಗಳಿಗೆ ಲಸಿಕೆ ಕೊಡುತ್ತಾರೆ. ಸರಿಯಾಗಿ ಸ್ಪಂದನೆ ನೀಡುವುದಿಲ್ಲ. ಔಷಧಿ ಮತ್ತು ಲಸಿಕೆಯನ್ನು ಹೊರಗೆ ತೆಗೆದುಕೊಳ್ಳಿ ಅಂತ ಬರೆದುಕೊಟ್ಟ ಕಳಿಸುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರೋಗ ತಗುಲಿದ ಪ್ರಾಣಿಗಳಲ್ಲಿ ಮೊದಲು ಜ್ವರ ಕಾಣಿಸಿಕೊಳ್ಳುತ್ತದೆ. ಒಂದು ವಾರದ ಬಳಿಕ ಚರ್ಮದಲ್ಲಿ ಗಂಟುಗಳು ಕಾಣಿಸಿಕೊಳ್ಳುತ್ತವೆ. ನಂತರ ಚರ್ಮದಲ್ಲಿ ತುರಿಕೆ ಆರಂಭವಾಗುತ್ತದೆ. ರೋಗ ಕಾಣಿಸಿಕೊಂಡ ಹಸುಗಳಲ್ಲಿ ಹಾಲಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತದೆ. ಅತಿಯಾದ ಜ್ವರ, ಮೂಗು ಮತ್ತು ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸುರಿಸುವುದು, ಮೈಮೇಲೆ ದೊಡ್ಡ ಗಂಟುಗಳ ಬರುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ. ಕೆಲ ರಾಸುಗಳು ಮೇವು ತಿನ್ನದೆ ಕ್ರಮೇಣ ಬಡಕಲಾಗುತ್ತವೆ. ತಳಿ ಸಂವರ್ಧನೆ ಹೋರಿಗಳಲ್ಲಿ ಬಂಜೆತನ ಕಾಣಿಸಿಕೊಳ್ಳಬಹುದು.

ರೋಗಕ್ಕೆ ಶೀಘ್ರವೇ ಚಿಕಿತ್ಸೆ ಕೊಡಿಸದಿದ್ದರೆ ಗಂಟುಗಳು ಕೊಳೆತು, ನೊಣ ಮತ್ತು ಉಣ್ಣೆ ಕಡಿತದಿಂದ ಚರ್ಮದಲ್ಲಿ ಆಳವಾದ ರಂಧ್ರಗಳಾಗುತ್ತವೆ. ರೋಗದ ಸ್ಥಿತಿ ಗಂಭೀರವಾದರೆ ರಾಸುಗಳು ಸಾವು ಸಂಭವಿಸಬಹುದು.

ವರದಿ.ಸುರೇಶ ಲಮಾಣಿ ಪಬ್ಲಿಕ್ ನೆಕ್ಸ್ಟ ಗದಗ

Edited By : Manjunath H D
PublicNext

PublicNext

13/09/2022 03:34 pm

Cinque Terre

25.03 K

Cinque Terre

2