ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ: ಜಿಲ್ಲಾ ನ್ಯಾ.ಬಸವರಾಜ

ಗದಗ: ಮಾದಕ ವಸ್ತುಗಳು, ತಂಬಾಕು, ಮದ್ಯದಂತಹ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ವಕೀಲರ ಸಂಘ, ಪೊಲೀಸ್ ಇಲಾಖೆ, ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಜಿಲ್ಲಾ ಘಟಕ ಹಾಗೂ ಮೈತ್ರಿ ಸಮಗ್ರ ವ್ಯಸನಿಗಳ ಪುನರ್‌ವಸತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ಆದರ್ಶ ಶಿಕ್ಷಣ ಸಮಿತಿಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರದಂದು ಆ್ಯಂಟಿ ಡ್ರಗ್ ಕ್ಲಬ್ ಮತ್ತು ಮಾದಕ ವಸ್ತುಗಳ ದುರ್ಬಳಕೆ ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲಾ ಕಾಲೇಜುಗಳಲ್ಲಿರುವ ಹಂತದಲ್ಲಿಯೇ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಾಗೃತಿ ಕಾರ್ಯಕ್ರಮಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ, ವಿದ್ಯಾರ್ಥಿಗಳು ಇದಕ್ಕೆ ಕೈ ಜೋಡಿಸುವ ಮೂಲಕ ತಂಬಾಕು, ದುಶ್ಚಟಗಳ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ, ಪ್ರಾ. ರವಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆ, ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕು.ಸೌಜನ್ಯಾ ತೆಂಬದಮನಿ ಪ್ರಾರ್ಥಿಸಿದರು. ಸುಮನ್ ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕ ಬಸವರಾಜ ಟಿ.ಪಿ ನಿರೂಪಿಸಿದರು. ರವಿ ಡಿ. ನಾಯ್ಕ್ ವಂದಿಸಿದರು.

Edited By : Nagaraj Tulugeri
Kshetra Samachara

Kshetra Samachara

26/09/2022 09:07 pm

Cinque Terre

13.24 K

Cinque Terre

0