ಗದಗ: ಹಿರಿಯ ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿಯನ್ನು ವಹಿಸಿಕೊಂಡು ಉತ್ತಮ ಜೀವನ ಸಾಗಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ತಿಳಿಸಿದರು.
ನಗರದ ಕೆ.ಎಚ್ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಗದಗ ಜಿಲ್ಲೆಯ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ನಿರ್ಣಾಯಕರ ತೀರ್ಪುಗಳನ್ನು ಸ್ವೀಕರಿಸಬೇಕು.ಇಲಾಖೆಯ ವಿವಿಧ ಸೌಲಭ್ಯಗಳನ್ನು ಹಿರಿಯ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಹಿರಿಯ ನಾಗರಿಕರ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಎಚ್.ಬೇಲೂರು ಹಾಗೂ ಬಿ.ಬಿ. ಹೂಗಾರ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಕೆ.ಎಚ್.ಬೇಲೂರ,ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಿ.ಬಿ. ಹೂಗಾರ, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೆಂದ್ರದ ಸಿಬ್ಬಂದಿಗಳು, ಹಿರಿಯ ನಾಗರಿಕರ ವೃದ್ಧಾಶ್ರಮ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Kshetra Samachara
26/09/2022 10:07 pm