ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಶಕ್ತಿ ಯೋಜನೆ ಎಫೆಕ್ಟ್: ಸಮಯಕ್ಕೆ‌ ಸರಿಯಾಗಿ ಬಾರದ‌ KSRTC ಬಸ್ : ಎಬಿವಿಪಿ‌ ಪ್ರೊಟೆಸ್ಟ್

ಗದಗ : ಶಾಲಾ ಕಾಲೇಜು ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ಎಬಿವಿಪಿ ವತಿಯಿಂದ ದಿಢೀರ್ ಪ್ರತಿಭಟನೆಯನ್ನ ಮಾಡಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿರೋ ಬಸ್ ನಿಲ್ದಾಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮಾಡಿದ್ರು.

ಶಕ್ತಿ ಯೋಜನೆ ಬಂದಾಗಿನಿಂದ ಬಸ್ಸಿನಲ್ಲಿ ಶಾಲಾ ಕಾಲೇಜಿಗೆ ತೆರಳಲು ತೊಂದರೆ ಆಗಿದೆ. ಸರಿಯಾದ ಸಮಯಕ್ಕೆ ಬಸ್ ಗಳು ಬರುತ್ತಿಲ್ಲ, ಇದ್ರಿಂದಾಗಿ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸರಿಯಾದ ಸಮಯಕ್ಕೆ ಬಸ್ ಗಳನ್ನು ಬಿಡಲು ಹಲವಾರು ಬಾರಿ ಮನವಿ ಮಾಡಿದ್ರೂ ಕೂಡಾ ಅಧಿಕಾರಿಗಳು ಸ್ಪಂದಿಸಿಲ್ಲ. ಹಾಗಾಗಿ ಬಸ್ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದೇವೆ ಅಂತಾ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳ ವಿರುಧ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಕೆಲಕಾಲ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಬಂದ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನ ಹಿಂಪಡೆಯಲಾಯಿತು.

Edited By : Manjunath H D
Kshetra Samachara

Kshetra Samachara

05/10/2024 08:49 pm

Cinque Terre

34.58 K

Cinque Terre

0