ಗದಗ: ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ಬೆಳೆ ಹಾನಿ ಪರಿಹಾರದಲ್ಲಿ ಗ್ರಾಮ ಲೆಕ್ಕಾಧಿಕಾರಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಗ್ರಾಮ ಲೆಕ್ಕಾಧಿಕಾರಿಯನ್ನು ರೈತರು ಕೂಡಿಹಾಕಿದ್ದಾರೆ. ನಿನ್ನೆ ಶುಕ್ರವಾರ ಈ ಘಟನೆ ನಡೆದಿದೆ.
ಹೊಂಬಳದ ಗ್ರಾಮ ಲೆಕ್ಕಾಧಿಕಾರಿ ವೀರನಗೌಡ ದಾನಪ್ಪಗೌಡರ ಎಂಬುವರನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ರೈತರು ಕೂಡಿ ಹಾಕಿದ್ದು ರಾತ್ರಿ 11 ಗಂಟೆಗೆ ಕಳೆದ್ರು ಗ್ರಾಮ ಲೆಕ್ಕಾಧಿಕಾರಿಯನ್ನು ರೈತರು ಬಿಡಲಿಲ್ಲ. ಬೇಕಾದವರಿಗೆ ಮಾತ್ರ ಬೆಳೆ ಹಾನಿ ಪರಿಹಾರ ಜಮಾ ಮಾಡಿರುವ ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮದಲ್ಲಿ 3180 ರೈತರ ಖಾತೆಗಳ ಪೈಕಿ 800 ರೈತರಿಗೆ ಮಾತ್ರ ಪರಿಹಾರ ಜಮೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ರೈತರು ಗ್ರಾಮ ಲೆಕ್ಕಾಧಿಕಾರಿಯನ್ನು ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ ಬರುವಂತೆ ಪಟ್ಟು ಹಿಡಿದಿದ್ದಾರೆ.
PublicNext
08/10/2022 10:38 am