ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಬೆಳೆಗಾರರಿಗೆ ಕಣ್ಣೀರು ತರಿಸಿದ ಈರುಳ್ಳಿ

ಗದಗ: ತಾಲೂಕಿನಾದ್ಯಂತ ಕಳೆದ ಎರಡ್ಮೂರು ವಾರಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ನೂರಾರು ಎಕರೆಯಲ್ಲಿ ಬೆಳೆದ ಈರುಳ್ಳಿಯೂ ನಿಂತ ನೀರಿನಲ್ಲಿ ಕೊಳೆತು ನಾರುತ್ತಿದ್ದು ಇಷ್ಟೆಲ್ಲಾ ಇದ್ದರೂ ಅಧಿಕಾರಿಗಳು ಮಾತ್ರ ಜಮೀನಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಕರೆಗೆ 40 ರಿಂದ 50 ಸಾವಿರ ಖರ್ಚು ಮಾಡಿ ಈರುಳ್ಳಿಯನ್ನು ರೈತರು ಬೆಳೆದಿದ್ದು, ಸತತ ಮಳೆಯಿಂದ ಜಮೀನಿನಲ್ಲಿಯೇ ಕೊಳೆತು ನಾರುತ್ತಿದೆ. ಇದರಿಂದ ಕೈಗೆ ಬಂದು ತುತ್ತು ಬಾಯಿಗೆ ಬಾರದ ಹಾಗೇ ಆಗಿದೆ. ಇಷ್ಟೆಲ್ಲಾ ಇದ್ದರೂ ಅಧಿಕಾರಿಗಳು ಮಾತ್ರ ಬರುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಅಡರಕಟ್ಟಿ ಗ್ರಾಮದಲ್ಲಿ ಸತತವಾಗಿ ಈರುಳ್ಳಿಯನ್ನು ಬೆಳೆಯುತ್ತಾರೆ. ಕಳೆದ ವರ್ಷ ಮಳೆ ಕೈ ಕೊಟ್ಟಿದ್ದರಿಂದ ಬೆಳೆ ಬರಲಿಲ್ಲ. ಈ ವರ್ಷವೂ ಮಳೆಯಾಗಿದ್ದು ಉತ್ತಮ ಫಸಲು ಬಂದಿತ್ತು. ಆದರೆ ಮಳೆಯಿಂದ ಸಂಪೂರ್ಣ ಹಾಳಾಗಿ ಹೋಗಿದೆ. ಅಧಿಕಾರಿಗಳು ನಮ್ಮ ಜಮೀನಿಗೆ ಬಂದು ಸರ್ವೇ ಮಾಡಿ ಸರಕಾರದಿಂದ ನಮಗೆ ಬೆಳೆ ಹಾನಿಗೆ ಪರಹಾರ ಕೊಡಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

ವರದಿ.ಸುರೇಶ ಲಮಾಣಿ ಪಬ್ಲಿಕ್ ನೆಕ್ಸ್ಟ್ ಗದಗ.

Edited By : Somashekar
PublicNext

PublicNext

21/10/2024 02:50 pm

Cinque Terre

16.54 K

Cinque Terre

0

ಸಂಬಂಧಿತ ಸುದ್ದಿ