ಗದಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್ ಮೊಹಸಿನ್ ಅವರು ಜಿಲ್ಲೆಯ ಹೊಂಬಳದಲ್ಲಿ ಇಂದು ಬೆಳಿಗ್ಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ಹಾಗೂ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅತಿಷ್ಟಿಯಿಂದ ಹಾನಿಗೊಳಗಾದ ಸಂತ್ರಸ್ತ ಅರ್ಹ ಎಲ್ಲಾ ಕುಟುಂಬಗಳಿಗೂ ಸಹ ಪರಿಹಾರ ದೊರೆಯಬೇಕು. ಪರಿಹಾರ ಕಾರ್ಯವನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಆದೇಶಿಸಿದರು. ಬೆಳೆ ಸಮೀಕ್ಷೆಯ ವರದಿ ನಿಖರವಾಗಿರಲಿ ಎಂದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸುಶೀಲಾ.ಬಿ ಅವರು ಹಾನಿ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್ ಮೋಹಸಿನ್ ಅವರಿಗೆ ಮನವರಿಕೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಕೃಷಿ ಜಂಟಿ ನಿರ್ದೇಶಕ ಜಿಯವುಲ್ಲಾ ಕೆ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಕಾಂತ ಕೋಟಿಮನಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪಿ.ಎಸ್.ಪಾಟೀಲ, ತಹಶೀಲ್ದಾರ ಕಿಶನ ಕಲಾಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.
Kshetra Samachara
16/09/2022 12:46 pm