ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪಶು ಆಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ. ಸಿಬ್ಬಂದಿ ಮಾತ್ರ ಇರುತ್ತಾರೆ.ಅವ್ರು ನಮಗೆ ಸರಿಯಾಗಿ ಸ್ಪಂದನೆ ಮಾಡುವುದಿಲ್ಲ. ಔಷಧಿ ಮತ್ತು ಲಸಿಕೆಯನ್ನು ಹೊರಗಡೆ ತೆಗೆದುಕೊಳ್ಳಿ ಎಂದು ಬರೆದುಕೊಡುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ರೈತರ ನಿದ್ದೆಗೆಡಿಸಿದ ಚರ್ಮ ಗಂಟು ರೋಗ ಎಂಬ ಶೀರ್ಷಿಕೆಯೊಂದಿಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿತ್ತು. ವರದಿಗೆ ಎಚ್ಚೆತ್ತುಕೊಂಡ ಪಶು ವೈದ್ಯರು ಪಟ್ಟಣದ ವಾರ್ಡ್ಗೆ ಹೋಗಿ ಎತ್ತುಗಳಿಗೆ ಚಿಕಿತ್ಸೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ರೈತರು ಖುಷಿಯಾಗಿದ್ದಾರೆ.
ಮಳೆಯ ಹೊಡೆತಕ್ಕೆ ತತ್ತರಿಸಿ ಹೋಗಿರುವ ರೈತರು ಒಂದು ಕಡೆಯಾದರೆ, ರಾಸುಗಳಿಗೆ ಚರ್ಮ ಗಂಟು ರೋಗ ಕಾಡುತ್ತಿರುವುದು ಮತ್ತೊಂದು ಕಡೆ. ಇದಕ್ಕೆ ಸರಿಯಾಗಿ ಚಿಕಿತ್ಸೆ ನೀಡದ ವೈದ್ಯರ ಸಮಸ್ಯೆಯಿಂದ ರೈತರು ನೊಂದು ಹೋಗಿದ್ರು. ಈಗ ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೆತ್ತುಕೊಂಡ ಪಶುವೈದ್ಯರು ಮನೆ ಮನೆಗೆ ಹೋಗಿ ಚಿಕಿತ್ಸೆ ನೀಡುತ್ತಿರುವುದರಿಂದ ರೈತರು ಸಂತಸಗೊಂಡಿದ್ದಾರೆ.
PublicNext
14/09/2022 01:51 pm