ಗದಗ ಜಿಲ್ಲೆ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಗನೂರ ಗ್ರಾಮದಲ್ಲಿ ಕಲುಷಿತ ನೀರು ಬರುತ್ತಿದೆ. ಮಲಪ್ರಭಾ ಜಲಾಶಯದ ಚಿಕ್ಕನರಗುಂದ ನೀರು ಸಂಗ್ರಹಾಲಯದಿಂದ ಕುಡಿಯುವ ನೀರು ಬಿಡುತ್ತಿದೆ. ಈ ನೀರನ್ನು ದನಕರುಗಳು ಸಹ ಕುಡಿಯುವುದಿಲ್ಲ ಎಂದು ಗ್ರಾಮಸ್ಥರು ನೀರನ್ನು ಬಾಟಲ್‌ನಲ್ಲಿ ಹಾಕಿಕೊಂಡು ಅಧಿಕಾರಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದಿಂದ ಕುಡಿಯುವ ನೀರಿಗಾಗಿ ಕೋಟಿಗಟ್ಟಲ್ಲೇ ಬಿಡುಗಡೆ ಮಾಡುತ್ತದೆ. ಆದರೆ ಅಧಿಕಾರಿಗಳು ಮಾತ್ರ ಗ್ರಾಮಗಳಿಗೆ ಕುಡಿಯಲು ಯೋಗ್ಯವಲ್ಲದ ನೀರು ಬಿಡುತ್ತಿದ್ದಾರೆ. ಈ ನೀರು ಕುಡಿದವರಿಗೆ ಹೊಟ್ಟೆ ನೋವು ಬಂದಿದೆ. ಈಗಾಗಲೇ ಗ್ರಾಮದ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇಷ್ಟೆಲ್ಲ ಇದ್ದರು ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿಕೊಂಡು ಕುಳಿತಿದ್ದಾರೆ. ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿಗೆ ಹಾಗೂ ಅಧಿಕಾರಿಗಳಿಗೆ ಎರಡು ದಿನದ ಹಿಂದೆ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ ಎಂದು ಹೇಳಿದರು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಇನ್ನಾದರೂ ತಾಲೂಕು ಆಡಿಳಿತ ಹಾಗೂ ಜಿಲ್ಲಾ ಆಡಳಿತ ಇಥ ಕಡೆ ಗಮನ ಹರಿಸಿ ಕುಡಿಯುವ ನೀರು ಸರಿಪಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.
PublicNext
02/10/2022 01:23 pm