ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿ ರಸ್ತೆಗಳು ತೀರಾ ಹದಗೆಟ್ಟಿವೆ. ದಿನನಿತ್ಯ ಸಾವಿರಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತದೆ. ಆದರಿಂದ ಆಟೋ ಚಾಲಕರು ರಸ್ತೆ ದುರಸ್ತಿ ಮಾಡಿ ಇಲ್ಲದಿದ್ರೆ ನಮಗೆ ದತ್ತು ನೀಡಿ ಎಂದು ಆಗ್ರಹಿಸಿದ್ದಾರೆ.
ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ ತವರು ಜಿಲ್ಲೆಯಲ್ಲಿ ಆಟೋ ಚಾಲಕರು ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ. ಈ ಹಾಳಾದ ರಸ್ತೆಗಳಲ್ಲಿ ದಿನನಿತ್ಯ ಆಟೋಗಳು ಓಡಾಡುತ್ತವೆ. ದುಡಿದ ದುಡಿಮೆ ಆಟೋ ರಿಪೇರಿಗೆ ಹಾಕುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಗದಗ ಜಿಲ್ಲಾ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಜೈ ಭೀಮ್ ಆಟೋ ಚಾಲಕರ ಸಂಘದಿಂದ ತೀರ್ಮಾನ ಮಾಡಿಕೊಂಡಿದ್ದಾರೆ.
ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ರಸ್ತೆ ಗುಂಡಿಗಳು ಕೆರೆಯಂತಾಗಿವೆ. ಗದಗ ಜಿಲ್ಲೆಯ ಜನತೆಯ ಹತ್ತಿರ ಹೋಗಿ ಭಿಕ್ಷೆ ಬೇಡಿ ಹಣ ಸಂಗ್ರಹ ಮಾಡಿ ರಸ್ತೆ ದುರಸ್ತಿ ಮಾಡಿಸುತ್ತೇವೆ ಎಂದು ಆಟೋ ಚಾಲಕರು ರಾಜ್ಯ ಸರ್ಕಾರ ಹಾಗೂ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
PublicNext
03/10/2022 12:48 pm