ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಮೂಗನೂರ ಗ್ರಾಮದ ಕೆರೆಗೆ ಮಲಪ್ರಭಾ ಜಲಾಶಯದ ಚಿಕ್ಕನರಗುಂದ ನೀರು ಸಂಗ್ರಹಾಲಯದಿಂದ ಕಲುಷಿತ ನೀರು ಬೀಡಲಾಗಿತ್ತು. ಪರಿಣಾಮ ಕುಡಿಯುವ ನೀರು ಕಲುಷಿತಗೊಂಡ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ 'ಕುಡಿಯುವ ನೀರು ಕಲುಷಿತ: ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ' ಎಂಬ ಶೀರ್ಷಿಕೆಯಡಿ ನಿನ್ನೆ ವರದಿ ಮಾಡಿತ್ತು. ಈ ಬೆನ್ನಲ್ಲೇ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಶುದ್ಧವಾದ ನೀರು ಬಿಡುವುದಾಗಿ ಭರವಸೆ ನೀಡಿದ್ದಾರೆ.
ಸ್ಥಳಕ್ಕೆ ಕುಡಿಯುವ ನೀರಿನ ಸರಬರಾಜು ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳು, ಆರ್.ಡಬ್ಲೂ.ಎಸ್.ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದಾಗಿ ಭರವಸೆ ನೀಡಿದ್ದಾರೆ.
Kshetra Samachara
03/10/2022 10:08 pm