ಗದಗ: ಪೌರ ಕಾರ್ಮಿಕರ ಬಗೆಗೆ ಆಡಳಿತ ಪಕ್ಷ ಹೊಂದಿರುವ ಅಪಾರ ಗೌರವ ಹಾಗೂ ಸಹಾನುಭೂತಿಯನ್ನು ದುರುಪಯೋಗ ಪಡಿಸಿಕೊಳ್ಳದೇ ಗದಗ-ಬೆಟಗೇರಿ ಅವಳಿ ನಗರದ ಸ್ವಚ್ಛತೆಗಾಗಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಉಷಾ ದಾಸರ ಸೂಚಿಸಿದರು.
ಶನಿವಾರ ನಗರಸಭೆಯ ತಮ್ಮ ಕಚೇರಿಯಲ್ಲಿ ನಡೆದ ಆರೋಗ್ಯ ವಿಭಾಗದ ಅಧಿಕಾರಿ ಹಾಗೂ ದಫೇದಾರ್ ಗಳ ಸಭೆಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ನೇಮಕಗೊಂಡಿರುವ ಪೌರ ಕಾರ್ಮಿಕರ ಬದಲು ಬೇರೆಯವರು ಕೆಲಸ ಮಾಡುತ್ತಿದ್ದಾರೆಂಬ ದೂರುಗಳು ಬಲವಾಗಿ ಕೇಳಿ ಬರುತ್ತಿದ್ದು, ಈ ರೀತಿ ಬೇರೆಯವರು ಕೆಲಸಕ್ಕೆ ಹಾಜರಾಗದೇ ನೇಮಕಗೊಂಡಿರುವ ಸಿಬ್ಬಂದಿಗಳೇ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಸಂಬಂಧಿಸಿದ ಅಧಿಕಾರಿಗಳು, ದಫೇದಾರ್ ಗಳು ನಿಗಾವಹಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಘಂಟಿ ಗಾಡಿ ಕಾರ್ಮಿಕರ ಕೆಲಸದ ಅವಧಿಯನ್ನು ವಿಸ್ತರಿಸಬೇಕು. ದಫೇದಾರ್ ಗಳು ಪೌರ ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸ್ವಚ್ಚತಾ ಕಾರ್ಯ ಕೈಗೊಳ್ಳುವ ಮೂಲಕ ಮಾದರಿ ನಗರವನ್ನಾಗಿಸಬೇಕು ಎಂದರು.
ಸಭೆಯಲ್ಲಿ ಆರೋಗ್ಯ ವಿಭಾಗದ ಅಧಿಕಾರಿ ಮಕಾನದಾರ, ದಫೇದಾರರಾದ ಹೇಮೇಶ್ ಯಟ್ಟಿ, ಕೆಂಚಪ್ಪ, ಚಂದ್ರಶೇಖರ್ ಹಾದಿಮನಿ, ಪಂಚಾಕ್ಷರಿ ದೊಡ್ಡಮನಿ, ಹನಮಂತ ದೊಡ್ಡಮನಿ, ವಾಸು ಹಾದಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
08/10/2022 05:54 pm