ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ಪ್ರತಿಷ್ಠಿತ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲಯಕ್ಕೆ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಕೊಡಮಾಡುವ 2020-21 ನೇ ಸಾಲಿನ ರಾಜ್ಯ ಅತ್ಯುತ್ತಮ ಎನ್ ಎಸ್ ಎಸ್ ಘಟಕ ಮತ್ತು ರಾಜ್ಯ ಅತ್ಯುತ್ತಮ ಎನ್ ಎಸ್ ಎಸ್ ಅಧಿಕಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೋಟ್ ಅವರು ಅವರು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಉದಯಕುಮಾರ ಹಂಪಣ್ಣವರ ಹಾಗೂ ಎನ್ ಎಸ್ ಎಸ್ ಅಧಿಕಾರಿ ಪ್ರೋ. ಸೋಮಶೇಖರ ಸಿ. ಕೆರಿಮನಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ಡಾ.ಕೇ. ಸಿ. ನಾರಾಯಣ ಗೌಡ, ಇಲಾಖೆಯ ಆಯುಕ್ತ ಡಾ.ಹೆಚ್ ಎನ್ ಗೋಪಾಲಕೃಷ್ಣ,ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೋ.ಲಿಂಗರಾಜ್ ಗಾಂಧಿ, ಎನ್ ಎಸ್ ಎಸ್ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಖಾದ್ರಿ ನರಸಿಂಹಯ್ಯ ,ರಾಜ್ಯ ಎನ್ ಎಸ್ ಎಸ್ ಅಧಿಕಾರಿ ಪ್ರತಾಪ ಲಿಂಗಯ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದಲ್ಲಿ ಒಟ್ಟು 24 ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
Kshetra Samachara
10/09/2022 04:55 pm