ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಮದ್ಯ ಮಾರಾಟ : ಜಿಲ್ಲಾಡಳಿತ ಮುಂದೆ ಪ್ರತಿಭಟನೆ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಪು.ಬಡ್ನಿ ಗ್ರಾಮದಲ್ಲಿ ‌ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಪು.ಬಡ್ನಿ ಗ್ರಾಮದ ರೈತ ಹೋರಾಟ ಸಮಿತಿಯು ಜಿಲ್ಲಾಡಳಿತ ಭವನ ಮುಂದೆ ಕಳಸಾ-ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷರಾದ ವಿಜಯ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪು.ಬಡ್ನಿ ಗ್ರಾಮದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮ ಸಾರಾಯಿ ಮಾರಾಟ ಜೋರಾಗಿ ನಡೆಯುತ್ತಿದೆ ನೂರಾರು ಬಾರಿ ನಾವು ಸಂಭಂದಿಸಿದ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಅಕ್ರಮ ಸಾರಾಯಿ ಮಾರಾಟ ಮತ್ತು ಮಾರಾಟಗಾರರನ್ನು ಮಟ್ಟಹಾಕುವುದು ಸಾಧ್ಯವಾಗಲಿಲ್ಲ ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಗ್ರಾಮದಲ್ಲಿ ಅಕ್ರಮ ಸಾರಾಯಿ ನಿಷೇಧ ಮಾಡಿ ಮಾರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

28/09/2022 04:25 pm

Cinque Terre

6.82 K

Cinque Terre

0