ಗದಗ: ಗದಗ ಜಿಲ್ಲಾದ್ಯಾಂತ ಶುಕ್ರವಾರ ಧಾರಾಕಾರ ಮಳೆ ಸುರಿಯುತ್ತಿದ್ದು ಇದರಿಂದ ವಾಹನ ಸವಾರರು ಹಾಗೂ ಜನಜಾನವಾರು ಅಸ್ತವ್ಯಸ್ತಗೊಂಡಿದೆ.
ಮಳೆ ಬಂದರೆ ಸಾಕು ಜಿಲ್ಲೆಯ ರಸ್ತೆಗಳು ಜಲಾವೃತಗೊಳ್ಳುವುದು ಸಾಮಾನ್ಯವಾಗಿದೆ. ಇದರಿಂದಾಗಿ ವಾಹನ ಸವಾರರು, ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇನ್ನೂ ಲಕ್ಷ್ಮೇಶ್ವರ ತಾಲೂಕಿನ ರಸ್ತೆಯು ಸ್ವಲ್ಪ ಮಳೆ ಬಂದರೆ ಮಳೆ ನೀರಿನಿಂದ ಜಲಾವೃತಗೊಳ್ಳುತ್ತದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ಚರಂಡಿಗಳಲ್ಲಿ ಕೊಳಚೆ ತುಂಬಿರುವುದರಿಂದ ಮಳೆ ನೀರು ಸರಳವಾಗಿ ಸಾಗದೆ ರಸ್ತೆಯಲ್ಲಿ ನೀರು ಸಂಗ್ರಹ ಆಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Kshetra Samachara
30/09/2022 04:29 pm