ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ್ ಸಿಟಿ ರೌಂಡ್ಸ್

ಗದಗ: ಇಂದು ಬೆಳ್ಳಂಬೆಳಗ್ಗೆ ಗದಗನ ಗ್ರೇನ್ ಮಾರುಕಟ್ಟೆ, ಹಾತಲಗೇರಿ ನಾಕಾ, ಬೆಟಗೇರಿ ಭಾಗ ಸೇರಿದಂತೆ ವಿವಿಧ ಪ್ರದೇಶಗಳಿಗೆ ಗದಗ-ಬೆಟಗೆರಿ ನಗರಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ ಭೇಟಿ ನೀಡಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದರು.

ಈ ವೇಳೆ ಅವಳಿ‌ ನಗರದ ಸ್ವಚ್ಛತೆ ಕುರಿತು ಅಸಡ್ಡೆ ತೋರಿದ ದಫೇದಾರ್ ಹಾಗೂ ಪೌರ ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು. ಸ್ವಚ್ಛತೆಯ ವಿಷಯದಲ್ಲಿ ಉದಾಸೀನತೆ ತೋರಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಇನ್ನೆರೆಡು ದಿನಗಳಲ್ಲಿ ಗ್ರೇನ್ ಮಾರುಕಟ್ಟೆಯನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು. ಸುರಕ್ಷತಾ ಪರಿಕರಗಳನ್ನು ಧರಿಸದ ಪೌರ ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು. ಪೌರ ಕಾರ್ಮಿಕರಿಗೆ ದಿನನಿತ್ಯ ಪೂರೈಸಲಾಗುವ ಉಪಹಾರದ ಗುಣಮಟ್ಟ ಪೌರ ಕಾರ್ಮಿಕರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಅನಿಲ್ ಅಬ್ಬಿಗೇರಿ, ಬಿಜೆಪಿ ಮುಖಂಡರಾದ ಭೀಮಸಿಂಗ್ ರಾಥೋಡ ಇದ್ದರು.

Edited By : PublicNext Desk
Kshetra Samachara

Kshetra Samachara

11/10/2022 10:34 am

Cinque Terre

9.72 K

Cinque Terre

0