ಗದಗ: ಜಿಲ್ಲೆಯ ನರೆಗಲ್ಲ ಕರ್ನಾಟಕ ವಿಧಾನಸಭೆ ಚುನಾವಣೆ ( 2023) ಸಮೀಪಿಸುತ್ತಿರುವಾಗಲೇ ರೋಣ ಮತಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಟಿಕೆಟ್ ಫೈಟ್ ಶುರುವಾಗಿದೆ.ಕ್ಷೇತ್ರದಲ್ಲಿ ಈಗಿನಿಂದಲೇ ಚುನಾವಣಾ ಕಾವು ಏರತೊಡಗಿದೆ. ರೋಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ಇದಕ್ಕೆ ಪುಷ್ಟಿ ಎಂಬಂತೆ ಗಜೇಂದ್ರಗಡದಲ್ಲಿ ದೊಡ್ಡ ಮಟ್ಟದಲ್ಲಿ ನಡೆದ ಕಾರ್ಯಕರ್ತರ ಸಂಕಲ್ಪ ಸಭೆ.
ರೋಣ ಕ್ಷೇತ್ರದ ಹಾಲಿ ಶಾಸಕರಿಗೆ (ಕಳಕಪ್ಪ ಬಂಡಿ) ಟಿಕೇಟ್ ಕೊಟ್ರೆ ಸೋಲು ಖಚಿತ ಎಂದು ಬಿಜೆಪಿ ಕಾರ್ಯಕರ್ತರೇ ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ನಾಲ್ಕು ವರ್ಷವಾದ್ರು ಯಾವುದೇ ಅಭಿವೃದ್ಧಿ ಕೆಲಸ ಇಲ್ಲ ಜನ ಮೆಚ್ಚುವ ಕೆಲಸವನ್ನು ಮಾಡಿಲ್ಲ. ರಸ್ತೆ, ಚರಂಡಿ ಸೇರಿದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಲ್ಲ. ಈ ಬಾರಿ ಟಿಕೇಟ್ ಕೊಟ್ರೆ ಗೆಲ್ಲೋದು ಬಹಳ ಕಠಿಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಆಸೆಯಂತೆ ಯುವಕರಿಗೆ ಅವಕಾಶ ಕೊಡಿ. ಅಂದಪ್ಪ ಸಂಕನೂರು ಅವರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪತ್ರದ ಮೂಲಕ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
Kshetra Samachara
12/10/2022 06:13 pm