ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ ಜಿಲ್ಲಾಡಳಿತ ಭವನದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಜಯಂತಿ

ಗದಗ:ಜಿಲ್ಲಾಡಳಿತ ಭವನದ ಮುಖ್ಯಸಭಾಂಗಣದಲ್ಲಿ ಇಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲಬಹದ್ದೂರ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ಮಹಾತ್ಮಾ ಗಾಂಧೀಜಿ ಹಾಗೂ ಲಾಲಬಹದ್ದೂರ ಶಾಸ್ತ್ರಿ ಅವರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಅಧ್ಯಕ್ಷೆ ಉಷಾ ಮಹೇಶ ದಾಸರ, ಎಂ.ಸಿ.ಎ. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕರಿಗೌಡರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಜಿ.ಪಂ ಸಿ.ಇ.ಓ ಡಾ.ಸುಶೀಲಾ ಬಿ. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ ನುಚ್ಚಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ವೀರಯ್ಯಸ್ವಾಮಿ ಹಿರೇಮಠ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು. ಶ್ರೀಮತಿ ಉಷಾ ಕಾರಂತ ಹಾಗೂ ಸಂಗಡಿಗರು ವೈಷ್ಣವೋ ಜನತೋ,ರಘುಪತಿ ರಾಘವ ರಾಜಾ ರಾಮ ಗಾಂಧೀ ಪ್ರಿಯ ಭಜನೆಗಳನ್ನು ಪ್ರಸ್ತುತ ಪಡಿಸಿದರು.

Edited By : PublicNext Desk
Kshetra Samachara

Kshetra Samachara

02/10/2022 11:48 am

Cinque Terre

5 K

Cinque Terre

0