", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/405356-1737619621-shi.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಕುಡಿಯುವ ನೀರಿನ ಅವ್ಯವಸ್ಥೆ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಪೂರೈಕೆಗೆ ಸಂಬಂಧಿಸಿದ ಕಾರ್ಯಗಳ ಪಟ್ಟಿ ತಯಾರು ಮಾಡಲಾ...Read more" } ", "keywords": "Gadag, Drinking Water Supply, Water Supply System, H.K. Patil, Karnataka News, Gadag News, Water Purification, Rural Development, Government Initiatives, Minister H.K. Patil, Water Supply Improvement,Politics", "url": "https://publicnext.com/article/nid/Gadag/Politics" } ಗದಗ: ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಗಂಭೀರ ಕ್ರಮ - ಸಚಿವ ಎಚ್.ಕೆ.ಪಾಟೀಲ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಗಂಭೀರ ಕ್ರಮ - ಸಚಿವ ಎಚ್.ಕೆ.ಪಾಟೀಲ

ಗದಗ: ಕುಡಿಯುವ ನೀರಿನ ಅವ್ಯವಸ್ಥೆ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಪೂರೈಕೆಗೆ ಸಂಬಂಧಿಸಿದ ಕಾರ್ಯಗಳ ಪಟ್ಟಿ ತಯಾರು ಮಾಡಲಾಗಿದೆ. ಶೀಘ್ರವೇ ನಿಯಮಿತ ನೀರು ಪೂರೈಕೆಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಎಚ್.ಕೆ.ಪಾಟೀಲ್ ತಿಳಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಸದ್ಯಕ್ಕೆ ನಗರಕ್ಕೆ 10 ದಿನಕ್ಕೊಂದು ಬಾರಿ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂಚಿನ 10 ದಿನಗಳೊಳಗಾಗಿ ನೀರು ಪೂರೈಕೆ ಪ್ರಮಾಣವನ್ನು ಪ್ರತಿ ದಿವಸಕ್ಕೆ ಪೂರೈಸಲು ಕ್ರಮ ವಹಿಸಲಾಗುವುದು.

ಮುಂಬರುವ ಫೆಬ್ರವರಿ ಅಂತ್ಯಕ್ಕೆ 4 ದಿವಸಕ್ಕೊಮ್ಮೆ ನೀರು ಸರಬರಾಜು ಮಾಡಲು ಪ್ರಯತ್ನಿಸಲಾಗುವುದು. ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ನೀರು ಪೂರೈಕೆ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ. ನಗರದ ತಿಲಕ್ ಪಾರ್ಕ್ನಲ್ಲಿ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆಯ ಕಾರ್ಯ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ತುಂಗಭದ್ರಾ ನೀರು ಹಸಿರು ಬಣ್ಣ : ಜಿಲ್ಲೆಯ ಮುಂಡರಗಿ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಕೊರ್ಲಹಳ್ಳಿ ಮತ್ತು ಗಂಗಾಪೂರ ಗ್ರಾಮಗಳ ವ್ಯಾಪ್ತಿಯ ನೀರು ಹಸಿರು ಬಣ್ಣಕ್ಕೆ ತಿರುಗಿರುವುದನ್ನು ಗಮನಿಸಿ,ಜಿಲ್ಲಾಡಳಿತ ಈಗಾಗಲೇ ತಾಲೂಕು ಆಡಳಿತ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದ್ದು, ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸದರಿ ವಿಷಯದ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿತ್ತು.

ನೀರು ಹಸಿರು ಬಣ್ಣಕ್ಕೆ ತಿರುಗಲು ಕಾರಣವಾಗಿರುವ ಅಂಶಗಳನ್ನು ಪತ್ತೆಹಚ್ಚಲು ನದಿ ನೀರಿನ ಮಾದರಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಪರೀಕ್ಷಿಸಲಾಗಿದ್ದು ಸದರಿ ನೀರು ಕುಡಿಯಲು ಯೋಗ್ಯವಿಲ್ಲವೆಂದು ವರದಿ ನೀಡಿರುತ್ತಾರೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ವಿಜಯನಗರ ಶುಗರ್ ಪ್ರೈವೇಟ್ ಲಿಮಿಟೆಡ್‌ನವರು ಕಾರ್ಖಾನೆಯ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡದಂತೆ ನಿರ್ಬಂಧಿಸಿದ್ದಾರೆ. ಈ ಕುರಿತು ಸ್ಥಳ ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಹಂತದಲ್ಲಿ ತಂಡ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಆತಂಕ ಪಡುವ ಅವಶ್ಯಕತೆ ಇಲ್ಲವೆಂದು ಸಚಿವರು ತಿಳಿಸಿದರು.

Edited By : Vinayak Patil
PublicNext

PublicNext

23/01/2025 01:37 pm

Cinque Terre

39.02 K

Cinque Terre

0

ಸಂಬಂಧಿತ ಸುದ್ದಿ