ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ನಗರಸಭೆ ಮಾಜಿ ಅಧ್ಯಕ್ಷೆ, ಇಬ್ಬರು ಸದಸ್ಯರು ಸೇರಿ 8 ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

ಗದಗ: ಗದಗ-ಬೆಟಗೇರಿ ನಗರಸಭೆ ಮಾಲೀಕತ್ವದ 54 ವಕಾರ ಸಾಲುಗಳನ್ನು ಕಾನೂನು ಬಾಹಿರವಾಗಿ ಲೀಜ್ ನೀಡಿದ ಹಾಗೂ ನಕಲಿ ಸಹಿ ಮಾಡಿದ ಆರೋಪದಡಿ ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಹಾಗೂ ಇಬ್ಬರು ಸದಸ್ಯರು ಸೇರಿ 8 ಜನರ ವಿರುದ್ಧ ಬೆಟಗೇರಿ ಬಡಾವಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.

ಗದಗ ನಗರದ ಅಕ್ಷಯ ಕಾಲೋನಿ ನಿವಾಸಿ ವಿರುಪಾಕ್ಷಪ್ಪ (ರಾಜು) ಗಂಗಾಧರಪ್ಪ ಮಾನ್ವಿ, ರೀಯಲ್ ಎಸ್ಟೇಟ್ ಉದ್ಯಮಿ ಪಂಕಜ್ ರೂಪಚಂದ್ ಬಾಫಣಾ, ಶಿದ್ದಪ್ಪ ಮಲ್ಲಪ್ಪ ಮಾರನಬಸರಿ, ವೀರೇಶ ಷಣ್ಮುಖಪ್ಪ ಕುಂದಗೋಳ, ಮಹೇಶ ವೆಂಕಟೇಶ ದಾಸರ, ಉಷಾ ಮಹೇಶ ದಾಸರ, ಅನಿಲ(ಶಿದ್ದಲಿಂಗಪ್ಪ) ಮಲ್ಲಪ್ಪ ಅಬ್ಬಿಗೇರಿ, ಗೂಳಪ್ಪ ಶಿವಪ್ಪ ಮುಶೀಗೇರಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.

2023ರ ಅಕ್ಟೋಬರ್ 25ರಿಂದ 2024ರ ಜುಲೈ 22ರ ನಡುವಿನ ಅವಧಿಯಲ್ಲಿ ಗದಗ-ಬೆಟಗೇರಿ ಮಾಲೀಕತ್ವದ ಸಾವಿರಾರು ಕೋಟಿ ರೂಪಾಯಿ. ಮೌಲ್ಯದ 54 ವಕಾರಸಾಲುಗಳನ್ನು ಕಾನೂನು ಬಾಹಿರವಾಗಿ ದೀರ್ಘ ಅವಧಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸುಳ್ಳು ಠರಾವು ಸೃಷ್ಟಿಸಿದ ಆರೋಪದಡಿ ನಗರಸಭೆ ಮಾಜಿ ಪ್ರಭಾರ ಪೌರಾಯಕ್ತ ಪ್ರಶಾಂತ ವರಗಪ್ಪನವರ ಅವರು ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ 2024ರ ಆಗಷ್ಟ್ 15ರಂದು ದೂರು ದಾಖಲಿಸಿದ್ದರು.

ನಕಲಿ ಸಹಿಯನ್ನು ಮಾಡಿ ಗದಗ-ಬೆಟಗೇರಿ ನಗರಸಭೆಗೆ ಹಾಗೂ ಸರಕಾರಕ್ಕೆ ಮೋಸ ಮಾಡಿದ ಆರೋಪದಡಿ ದೂರು ದಾಖಲಾಗಿತ್ತು. ಈಗ ಬೆಟಗೇರಿ ಬಡಾವಣೆ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.

Edited By : Vijay Kumar
PublicNext

PublicNext

05/02/2025 12:55 pm

Cinque Terre

12.38 K

Cinque Terre

1

ಸಂಬಂಧಿತ ಸುದ್ದಿ