ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಬಗರ್ ಹುಕುಂ ಸಾಗುವಳಿದಾರರ 4ನೇ ದಿನಕ್ಕೆ ಕಾಲಿಟ್ಟ ಧರಣಿ : ಸ್ಥಳಕ್ಕೆ ಎಸಿ ಭೇಟಿ

ಗದಗ : ಗದಗ ಜಿಲ್ಲೆ ಶಿರಹಟ್ಟಿ ಪಟ್ಟಣದ ತಹಶೀಲ್ದಾರ ಕಚೇರಿಯ ಎದುರುಗಡೆ ನಡೆಯುತ್ತಿರುವ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಾಲ್ಲೂಕು ಸಮಾಜ ಕಲ್ಯಾಣ ಹಾಗೂ ಅರಣ್ಯ ಅಧಿಕಾರಿಗಳಿಗೆ ಘೇರಾವ್ ಹಾಕಿದ ಘಟನೆ ಜರುಗಿದೆ.

ತಹಶೀಲ್ದಾರ ಕಚೇರಿಯ ಎದರುಗಡೆ ಧರಣಿ ನಡೆಯುತ್ತಿದ್ದರೂ ಅಧಿಕಾರಿಗಳು ಕ್ಯಾರೆ ಎನ್ನದೆ ಇರುವುದಕ್ಕೆ ರೋಷಿ ಹೋದ ಪ್ರತಿಭಟನಾಕಾರರು ಸುಮಾರು ಒಂದು ಘಂಟೆಗಳ ಕಾಲ ಅಧಿಕಾರಿಗಳಿಗೆ ಘೇರಾವ್ ಹಾಕಿದರು.

ಅನ್ಯ ಸಭೆಯ ನಿಮಿತ್ಯ ತಹಶೀಲ್ದಾರ ಕಚೇರಿಗೆ ಆಗಮಿಸಿದ ಎಸಿ ಅನ್ನಪೂರ್ಣ ಮುದಕಮ್ಮನವರ ಕಾರಿಗೆ ಮುತ್ತಿಗೆ ಹಾಕಿದ ಧರಣಿ ನಿರತರು ಪ್ರತಿಭಟನೆಯನ್ನು ತೀವ್ರಗೊಳಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

Edited By : Manjunath H D
Kshetra Samachara

Kshetra Samachara

15/09/2022 02:32 pm

Cinque Terre

8.02 K

Cinque Terre

0