ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಹದಗೆಟ್ಟ ರಸ್ತೆ ಬಂದ್ ಮಾಡಿ ಪ್ರತಿಭಟನೆ: ಶೀಘ್ರ ದುರಸ್ತಿಗೆ ಆಗ್ರಹಿಸಿದ ಜಯ ಕರ್ನಾಟಕ ಸಂಘಟನೆ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ರಸ್ತೆಗಳು ಸೇರಿದಂತೆ ತಾಲೂಕಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹದಗೆಟ್ಟಿದ್ದು ಕೂಡಲೇ ದುರಸ್ತಿಗೊಳಿಸಬೇಕು ಎಂದು ಜಯ ಕರ್ನಾಟಕ ಲಕ್ಷ್ಮೇಶ್ವರ ತಾಲೂಕು ಘಟಕದ ವತಿಯಿಂದ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡುವ ವೇಳೆಯಲ್ಲಿ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಪಿಎಸ್ಐ ಪ್ರಕಾಶ ಡಿ ಅವರು ವಾಹನ ಸಂಚಾರಕ್ಕೆ ಜಾಗ ಬಿಡುವಂತೆ ಹೇಳಿದ್ರು. ಆದ್ರೆ ಅಧಿಕಾರಿಗಳು ಬರುವವರೆಗೂ ರಸ್ತೆ ಬಿಡಲ್ಲ ಎಂದು ಜಯ ಕರ್ನಾಟಕ ತಾಲೂಕು ಅಧ್ಯಕ್ಷ ಇಸ್ಮಾಯಿಲ್ ಆಡೂರ ರಸ್ತೆಯ ಮೇಲೆ ಮಲಗಿ ಪ್ರತಿಭಟನೆ ಮಾಡಿದ ಘಟನೆ ಜರುಗಿತು.

ಪಟ್ಟಣ ಪಾಳಾ - ಬಾದಾಮಿ ರಾಜ್ಯ ಹೆದ್ದಾರಿ ಸೇರಿದಂತೆ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿದ್ದಲ್ಲದೇ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು ಸಂಚಾರಕ್ಕೆ ತೊಂದರೆಯಾಗಿದೆ.

Edited By : Nagesh Gaonkar
PublicNext

PublicNext

24/09/2022 05:02 pm

Cinque Terre

30.88 K

Cinque Terre

0

ಸಂಬಂಧಿತ ಸುದ್ದಿ