ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಮೀಪದ ಪಶುಪತಿಹಾಳ ಗ್ರಾಮದಿಂದ ಲಕ್ಷ್ಮೇಶ್ವರ ಮತ್ತು ಸಂಶಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ಗಳು ಇಲ್ಲದಿರುವುದನ್ನು ಖಂಡಿಸಿ ನೂರಾರು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ರಾಜ್ಯ ಹೆದ್ದಾರಿ ಮೇಲೆ ರಸ್ತೆಗೆ ಚಕ್ಕಡಿ ಅಡ್ಡ ನಿಲ್ಲಿಸಿ ತೀವ್ರ ಪ್ರತಿಭಟನೆ ಮಾಡಿದರು.
ಮೂರ್ನಾಲ್ಕು ದಿನಗಳ ಹಿಂದೆ ಪ್ರತಿಭಟನೆ ಮಾಡಿದಾಗ ಲಕ್ಷ್ಮೇಶ್ವರ ಘಟಕ ವ್ಯವಸ್ಥಾಪಕರು ಮತ್ತು ಸಿಬ್ಬಂದಿಯವರು ಬಸ್ ಬಿಡುವದಾಗಿ ಆಶ್ವಾಸನೆ ನೀಡಿದ್ದರು. ಆದರೆ ಇದುವರೆಗೂ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವದರಿಂದ ರೋಷಿ ಹೋದ ವಿದ್ಯಾರ್ಥಿಗಳು ಶುಕ್ರವಾರ ಮುಂಜಾನೆ ಹಠಾತ ಪ್ರತಿಭಟನೆ ಕೈಗೊಂಡಿದ್ದಾರೆ.
ಪಶುಪತಿಹಾಳ ಗ್ರಾಮದಿಂದ ಲಕ್ಷ್ಮೇಶ್ವರಕ್ಕೆ ಶಾಲಾ ಕಾಲೇಜುಗಳಿಗಾಗಿ ನೂರಾರು ವಿದ್ಯಾರ್ಥಿಗಳು ಮತ್ತು ಸಂಶೀ ಗ್ರಾಮಕ್ಕೆ ನೂರಾರು ವಿದ್ಯಾರ್ಥಿಗಳು ತೆರಳುತ್ತಿದ್ದು ಪ್ರತಿದಿನವೂ ತೊಂದರೆ ಅನುಭವಿಸುತ್ತಿದ್ದು ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಪಟ್ಟು ಹಿಡಿದಿದ್ದಾರೆ.
PublicNext
23/09/2022 07:09 pm