ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ರೈತ ಸಂಪರ್ಕ ರಸ್ತೆ ನಿರ್ಮಿಸುವ ಬಗ್ಗೆ ನಿರ್ಲಕ್ಷ್ಯ; ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಆಕ್ರೋಶ

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಇಂದು(ಸೋಮವಾರ) ಬೆಳಗ್ಗೆ ರೈತ ಸಂಪರ್ಕ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ನೂರಾರು ರೈತರು ಗ್ರಾಮ ಪಂಚಾಯಿತಿಗೆ ದೌಡಾಯಿಸಿ, ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.

ಕಳೆದ ನಾಲ್ಕೈದು ವರ್ಷಗಳಿಂದಲೂ ಶಿಗ್ಲಿ - ಗೋವನಾಳ ಮಧ್ಯದ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ನೂರಾರು ಎಕರೆ ಜಮೀನು ಈ ಭಾಗದಲ್ಲಿದೆ. ರೈತರು ಎಷ್ಟೇ ಮನವಿ ಮಾಡಿದ್ರೂ, ಸಂಬಂಧಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿಯವರು ನಿರ್ಲಕ್ಷ್ಯ ತೋರುತ್ತಿದ್ದು, ರೈತ ಸಂಪರ್ಕ ರಸ್ತೆಯನ್ನು ಕೈಗೆತ್ತಿಕೊಳ್ಳುವವರೆಗೂ ಪ್ರತಿಭಟನೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಬಿಗಿಪಟ್ಟು ಹಿಡಿದು ಕುಳಿತಿದ್ರು.

ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕಯ್ಯ ಮುಳಗುಂದಮಠ, ಉಪಾಧ್ಯಕ್ಷ ಯಲ್ಲಪ್ಪ ತಳವಾರ, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆ ಸ್ಥಳಕ್ಕೆ ಬಂದರು. ಈ ವೇಳೆ ರೈತರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ. ರೈತ ಸಂಪರ್ಕ ರಸ್ತೆ ನಿರ್ಮಿಸುವ ಕುರಿತು ಸ್ಪಷ್ಟ ನಿರ್ಧಾರ ಇಂದೇ ಆಗಬೇಕು ಎಂದು ಪಟ್ಟು ಹಿಡಿದರು.

Edited By :
PublicNext

PublicNext

10/10/2022 05:13 pm

Cinque Terre

33.87 K

Cinque Terre

1