ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಓಟಿಂಗ್ ಆರಂಭ

ಪಾಟ್ನಾ: ಬಿಹಾರ ರಾಜ್ಯದಲ್ಲಿಂದು 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.

ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಕೊರೊನಾ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಒಂದು ಮತಗಟ್ಟೆಯಲ್ಲಿ 1600ರಿಂದ 1000 ಮತದಾರರಿಗೆ ಮಾತ್ರ ಹಕ್ಕು ಚಲಾಯಿಸಲು ಅನುಮತಿ ನೀಡಿದೆ.

80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.

ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಿಲಿದ್ದಾರೆ.

ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗಿಗಳಿದ್ದಾರೆಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಮಂದಿ ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Edited By : Nirmala Aralikatti
PublicNext

PublicNext

28/10/2020 07:59 am

Cinque Terre

40.58 K

Cinque Terre

0

ಸಂಬಂಧಿತ ಸುದ್ದಿ