ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ ರಾವತ್ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. "ಬಿಪಿನ್ ರಾವತ್ ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ತನ್ನ ಅನುಭವದ ಮೂಲಕ ದೇಶದ ಸೇನೆ ಬಲವರ್ಧನೆಗೆ ಶ್ರಮಿಸಿದ್ದಾರೆ. ಇಂತಹ ಮಹಾನ್ ವ್ಯಕ್ತಿ ನಮ್ಮೊಂದಿಗೆ ಇಲ್ಲ. ಎಂದಿಗೂ ದೇಶ ಬಿಪಿನ್ ರಾವತ್ ಅವರನ್ನು ಮರೆಯೋಕೆ ಸಾಧ್ಯವಿಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
PublicNext
08/12/2021 07:00 pm