ಲಖನೌ: ಉತ್ತರ ಪ್ರದೇಶದ ಹಪುರ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 13 ಕಾರ್ಮಿಕರು ಬಲಿಯಾಗಿದ್ದು, 30 ಮಂದಿ ಗಾಯಗೊಂಡಿದ್ದಾರೆ.
ಯುಪಿಎಸ್ಐಡಿಸಿ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಈ ದುರಂತ ಸಂಭವಿಸಿದೆ.ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಮೇಲ್ಛಾವಣಿ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಮೃತಪಟ್ಟ ಕಾರ್ಮಿಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸಲು ಪರವಾನಗಿ ಪಡೆದ ಕಾರ್ಖಾನೆಯಲ್ಲಿ ಪಟಾಕಿ ತಯಾರಿಸಲಾಗುತ್ತಿತ್ತು. ಇದೇ ಕಾರಣಕ್ಕೆ ದುರಂತ ಸಂಭವಿಸಿದೆ ಎಂಬ ಮಾಹಿತಿ ಇದೆ. ಘಟನೆ ನಂತರ ಮಾಲೀಕ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಲಾಗಿದೆ.
PublicNext
05/06/2022 10:45 pm