ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪ್ರತಿಭಟನೆ : ಅನ್ನದಾತರ ವಿರುದ್ಧ ಸುಪ್ರೀಂಗೆ ಅರ್ಜಿ!

ಹೊಸದಿಲ್ಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಪ್ರತಿಭಟನೆಯಿಂದಾಗಿ ದೆಹಲಿಗೆ ತುರ್ತು ವೈದ್ಯಕೀಯ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವೈದ್ಯಕೀಯ ಸೇವೆಗೆ ಅಡ್ಡಿಪಡಿಸುತ್ತಿರುವ ಪ್ರತಿಭಟನಾ ನಿರತ ರೈತರನ್ನು ದೆಹಲಿ ಗಡಿಯಿಂದ ತೆರವುಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ರೈತರು, ತುರ್ತು ವೈದ್ಯಕೀಯ ಸೇವೆಗಳಿಗೆ ಅಡ್ಡಿಯನ್ನುಂಟು ಮಾಡುತ್ತಿದ್ದಾರೆ, ಇದರಿಂದ ಸಕಾಲದಲ್ಲಿ ವೈದ್ಯಕೀಯ ನೆರವು ಸಿಗದೇ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಈ ಕುರಿತು ಮಾತನಾಡಿರುವ ಅರ್ಜಿದಾರ ಪರ ವಕೀಲ ಓಂ ಪ್ರಕಾಶ್ ಪರಿಹಾರ್, ಈ ಕೂಡಲೇ ದೆಹಲಿ ಗಡಿಯಿಂದ ರೈತರನ್ನು ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಗೆ ಆಗ್ರಹಿಸಿದ್ದಾರೆ.

ತುರ್ತು ವೈದ್ಯಕೀಯ ಸೇವಾ ವಾಹನಗಳನ್ನು ದೆಹಲಿಯೊಳಗೆ ಬಿಡಲಾಗುತ್ತಿಲ್ಲ. ಮಾನವೀಯ ದೃಷ್ಟಿಯಿಂದ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅರ್ಜಿದಾರರು ಸುಪ್ರೀಂಕೋರ್ಟ್ ಗೆ ಅಹವಾಲು ಸಲ್ಲಿಸಿದ್ದಾರೆ.

ಇಂದು (ಡಿ.05-ಶನಿವಾರ) ಕೇಂದ್ರ ಸರ್ಕಾರ ಹಾಗೂ ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾಗಿದ್ದು, ದೆಹಲಿ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ರೈತರು ಬೀಡು ಬಿಟ್ಟಿದ್ದಾರೆ.

Edited By : Nirmala Aralikatti
PublicNext

PublicNext

05/12/2020 08:39 am

Cinque Terre

74.41 K

Cinque Terre

3

ಸಂಬಂಧಿತ ಸುದ್ದಿ