ನವದೆಹಲಿ : ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕಬ್ಬು ಬೆಳೆಗಾರರಿಗೆ 3,500 ಕೋಟಿ ಮೊತ್ತದ ಸಬ್ಸಿಡಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
ಈ ವರ್ಷ 310 ಲಕ್ಷ ಟನ್ ಸಕ್ಕರೆ ಉತ್ಪಾದನೆ ಮಾಡಲಾಗುತ್ತಿದ್ದು, ಸಬ್ಸಿಡಿಯಿಂದ ಸಕ್ಕರೆ ಉತ್ಪಾದನೆಗೆ ಅನುಕೂಲವಾಗಲಿದೆ.
ಒಟ್ಟಾರೆ ವಿಶೇಷ ಪ್ಯಾಕೇಜ್ ನಿಂದ 5 ಕೋಟಿ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
PublicNext
16/12/2020 04:08 pm