ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೀವ್ರಗೊಂಡ ಪ್ರತಿಭಟನೆ ಕಾವು : ರೈತರಿಂದ ರಸ್ತೆತಡೆ

ನೊಯಿಡಾ/ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಮಸೂದೆ ವಿರೋಧಿಸಿ ಅನ್ನದಾತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಮಾತ್ರ ಕ್ಯಾರೇ ಎನ್ನುತ್ತಿಲ್ಲ.

ಸದ್ಯ ಕಂಗಾಲಾದ ರೈತ ಹೋರಾಟ ಮಂಗಳವಾರ ತೀವ್ರಗೊಂಡಿತ್ತು. ರಸ್ತೆ ತಡೆ ನಡೆಸಿದ್ದರಿಂದ ನೊಯಿಡಾ-ಗ್ರೇಟರ್ ನೊಯಿಡಾ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ತಟಸ್ಥವಾಗಿ ಉಳಿದಿವೆ.

ಇಂದು ಮತ್ತೆ ಮಾತುಕತೆ : ಅಂತಿಮ ನಿರ್ಧಾರ ಸಾಧ್ಯತೆ

ಕೇಂದ್ರ ಸರ್ಕಾರ ಮುಂದಿಟ್ಟಿರುವ ಹೊಸ ಮಾತುಕತೆ ಪ್ರಸ್ತಾವದ ಬಗ್ಗೆ ರೈತ ಸಂಘಟನೆಗಳು ಬುಧವಾರ ನಿರ್ಧಾರ ತೆಗೆದುಕೊಳ್ಳಲಿವೆ.

ಬೆಂಗಳೂರು: ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಮುಂದಿನ ಎಲ್ಲಾ ಕ್ರಮಗಳೂ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಹೈಕೋರ್ಟ್ ಹೇಳಿದೆ.

ತಿದ್ದುಪಡಿ ಪ್ರಶ್ನಿಸಿ ಬೆಂಗಳೂರಿನ ವಕೀಲರಾದ ಗೀತಾ ಮಿಶ್ರಾ, ಬಾಗಲಕೋಟೆ ಜಿಲ್ಲೆಯ ಇಳಕಲ್ನ ಸಾಮಾಜಿಕ ಹೋರಾಟಗಾರ ನಾಗರಾಜ ಹೊಂಗಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸುಗ್ರೀವಾಜ್ಞೆ ಪ್ರಶ್ನಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಜ.5ರವರೆಗೆ ಗಡುವು ನೀಡಿತು.

'ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಉಭಯ ಸದನಗಳು ಅನುಮೋದಿಸಿವೆ.

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು' ಎಂದು ಸರ್ಕಾರದ ಪರ ವಕೀಲರು ಕೋರಿದರು.

'ಮಸೂದೆಗೆ ರಾಜ್ಯಪಾಲರು ಇನ್ನೂ ಅನುಮೋದನೆ ನೀಡಿಲ್ಲ. ಆಕ್ಷೇಪಣೆ ಸಲ್ಲಿಸಲು ಸರ್ಕಾರ ವಿಳಂಬ ಮಾಡುತ್ತಿದ್ದು, ಮತ್ತೊಮ್ಮೆ ಕಾಲಾವಕಾಶ ನೀಡಬಾರದು' ಎಂದು ಅರ್ಜಿದಾರರ ಪರ ವಕೀಲರು ಪೀಠದ ಗಮನಕ್ಕೆ ತಂದರು.

ಜ.5ರೊಳಗೆ ಆಕ್ಷೇಪಣೆ ಸಲ್ಲಿಸದಿದ್ದರೆ ಮತ್ತೊಮ್ಮೆ ಸಮಯ ನೀಡುವುದಿಲ್ಲ' ಎಂದು ತಿಳಿಸಿದ ಪೀಠ, ಜ.6ಕ್ಕೆ ವಿಚಾರಣೆ ಮುಂದೂಡಿತು.

Edited By : Nirmala Aralikatti
PublicNext

PublicNext

23/12/2020 08:10 am

Cinque Terre

95.02 K

Cinque Terre

0

ಸಂಬಂಧಿತ ಸುದ್ದಿ