ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

9 ಕೋಟಿ ರೈತರಿಗೆ 18,000 ಕೋಟಿ ರೂ. : ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ 19,000 ಸ್ಥಳಗಳಲ್ಲಿ ರೈತರು-ಪ್ರಧಾನಿಗಳ ಸಂವಾದ ಕಾರ್ಯಕ್ರಮವನ್ನು ವರ್ಚ್ಯುಯಲ್ ಸಭೆ ಮೂಲಕ ಆಯೋಜಿಸಿದ್ದು, ಇದಕ್ಕೂ ಮುನ್ನ ಪ್ರಧಾನಿ 18,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದಾರೆ.

ಡಿ.25, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾಗಿದ್ದು, ಈ ದಿನವನ್ನು ಉತ್ತಮ ಆಡಳಿತ ದಿನ' (ಗುಡ್ ಗೌರ್ನೆನ್ಸ್ ಡೇ) ಯನ್ನಾಗಿ ಆಚರಿಸುತ್ತದೆ.

ಇದರ ಭಾಗವಾಗಿ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಿಗಬೇಕಿರುವ 2,000 ರೂಪಾಯಿಗಳ ಕಂತನ್ನು ಬಿಡುಗಡೆ ಮಾಡಲಾಗಿದೆ.

ಈ ಯೋಜನೆಯಡಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂಪಾಯಿಗಳನ್ನು ನೀಡಲಾಗುತ್ತದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಪ್ರಧಾನಿ-ರೈತರ ಸಂವಾದ ಏರ್ಪಡಿಸಲಾಗಿದೆ.

Edited By : Nirmala Aralikatti
PublicNext

PublicNext

25/12/2020 02:55 pm

Cinque Terre

48.47 K

Cinque Terre

0

ಸಂಬಂಧಿತ ಸುದ್ದಿ