ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪ್ರತಿಭಟನೆ: ಡಿ.30 ಕ್ಕೆ ಸಭೆ ಕರೆದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಸರ್ಕಾರ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿದೆ.

ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ವಿರೋಧಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಿಸೆಂಬರ್ 30ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಭೆಗೆ ಬರುವಂತೆ ಕೃಷಿ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಅಗರ್ ವಾಲ್ ಅವರು ರೈತ ಸಂಘಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಡಿಸೆಂಬರ್ 29ರಂದು ಮಾತುಕತೆ ನಡೆಸುವಂತೆ ಸರ್ಕಾರಕ್ಕೆ ರೈತ ಸಂಘಟನೆಗಳು ಪ್ರಸ್ತಾವನೆ ಸಲ್ಲಿಸಿದ್ದವು.

Edited By : Nirmala Aralikatti
PublicNext

PublicNext

28/12/2020 05:51 pm

Cinque Terre

39.6 K

Cinque Terre

1

ಸಂಬಂಧಿತ ಸುದ್ದಿ