ನವದೆಹಲಿ : ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಕಳೆದ ಒಂದು ತಿಂಗಳಿಂದ ಅನ್ನದಾತರು ನಿರಂತರ ಹೋರಾಟ ಮಾಡುತ್ತಿದ್ದಾರೆ.
ಹೀಗೆ ಮೈ ಕೊರೆಯುವ ಚಳಿಯಲ್ಲಿ ಬಿಡದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹಲವರು ಬೆಂಬಲ ನೀಡಿದ್ದಾರೆ ಜೊತೆಗೆ ಇನ್ನು ಕೆಲವರು ವಿವಿಧ ರೀತಿಯ ಸಹಾಯ ಸಹಕಾರ ಮಾಡುತ್ತಿದ್ದಾರೆ.
ಆ ಸಾಲಿನಲ್ಲಿ ಈಗಾ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೈತರಿಗೆ ಉಚಿತ ವೈಫೈ ವ್ಯವಸ್ಥೆ ಕಲ್ಪಿಸಲು ರೈತರ ಸೇವಾದಾರ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರೈತರು ಅವರ ಕುಟುಂಬದವರೊಂದಿಗೆ ಸಂಪರ್ಕದಲ್ಲಿರುವುದನ್ನು ನಾವು ಬಯಸುತ್ತೇವೆ.
ಆದ್ದರಿಂದ ವೈಫೈ ಹಾಟ್ ಸ್ಪಾಟ್ ಗಳನ್ನು ಸ್ಥಾಪಿಸುವುದಕ್ಕೆ ಕೆಲವು ಪ್ರದೇಶಗಳನ್ನು ಗುರುತಿಸಿದ್ದೇವೆ, ಇದು ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಉಪಕ್ರಮವಾಗಿದೆ ಎಂದು ತಿಳಿಸಿದ್ದು ಬೇಡಿಕೆ ಹೆಚ್ಚಿದರೆ ಇನ್ನಷ್ಟು ವೈಫೈ ಸ್ಪಾಟ್ ಗಳನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.
ರೈತರ ಪ್ರತಿಭಟನೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಬೆಂಬಲ ದೊರೆತಿದೆ.
PublicNext
29/12/2020 06:30 pm