ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರ ಪ್ರತಿಭಟನೆ : ಪಾಟ್ನಾದಲ್ಲಿ ಲಾಠಿ ಚಾರ್ಜ್ ಕೆಲವರಿಗೆ ಗಾಯ!

ಪಾಟ್ನಾ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಕಳೆದ ಒಂದು ತಿಂಗಳಿಂದ ಅನ್ನದಾತರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಸರ್ಕಾರ ಮಾತ್ರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನು ಶಾಂತಿಯುತ ಹೋರಾಟಕ್ಕೆ ಜಗ್ಗದ ಸರ್ಕಾರದ ನಡೆ ಖಂಡಿಸಿ ಪಾಟ್ನಾದಲ್ಲಿ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ.

ಈ ವೇಳೆ ರಸ್ತೆಗೆ ಅಳವಡಿಸಿದ್ದ ಬ್ಯಾರಿಕೇಡ್ ಗಳನ್ನು ಕಿತ್ತು ಮುನ್ನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ.

ವಿವಿಧ ರೈತ ಸಂಘಟನೆಗಳ ಸದಸ್ಯರು ಮತ್ತು ಎಡಪಂಥೀಯ ಪರ ಸಂಘಟನೆಗಳನ್ನು ಒಳಗೊಂಡ ಸಾವಿರಾರು ಪ್ರತಿಭಟನಾಕಾರರನ್ನು ಡಕ್ ಬಂಗಲೆ ಕ್ರಾಸಿಂಗ್ ನಲ್ಲಿ ಪೊಲೀಸರು ತಡೆಯೊಡ್ಡಿದರು.

ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್ ಕಿತ್ತು ಮುನ್ನುಗ್ಗಲು ಮುಂದಾದರೂ ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ರಸ್ತೆ ಮಧ್ಯೆ ನಮ್ಮನ್ನು ತಡೆಯುವುದರ ಜೊತೆ ಲಾಠಿ ಚಾರ್ಜ್ ಮಾಡಿ ತಮ್ಮ ಧ್ವನಿಯನ್ನು ಹತ್ತಿಕ್ಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನು ಲಾಠಿ ಚಾರ್ಜ್ ವೇಳೆ ಗಾಯಗೊಂಡಿರುವ ಪ್ರತಿಭಟನಾಕಾರರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Edited By : Nirmala Aralikatti
PublicNext

PublicNext

29/12/2020 06:52 pm

Cinque Terre

51.69 K

Cinque Terre

1