ನವದೆಹಲಿ: ಕೇಂದ್ರ ಸರ್ಕಾಋ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಸರ್ಕಾರದ ನಡುವೆ ಇಂದು ಎಂಟನೇ ಸುತ್ತಿನ ಮಾತುಕತೆ ನಡೆಯಲಿದೆ.
ಕಾಯ್ದೆಗಳನ್ನು ಹಿಂಪಡೆಯಲು ಸರ್ಕಾರ ನಿರಾಕರಿಸುತ್ತಿದೆ.
ಆದರೆ ಇವುಗಳಿಂದ (ಕಾಯ್ದೆಗಳಿಂದ) ನಮ್ಮ ಆದಾಯಕ್ಕೆ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಜನವರಿ 26ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಗಣರಾಜ್ಯೋತ್ಸವದಂದು ದೆಹಲಿಗೆ ನುಗ್ಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಅದರಂತೆ ರಾಜಧಾನಿಯ ಹೊರವಲಯದಲ್ಲಿ ಗುರುವಾರ ಟ್ರಾಕ್ಟರ್ ತಾಲೀಮು ಆರಂಭವಾಗಿದೆ.
ಜನವರಿ 4ರಂದು ಏಳನೇ ಸುತ್ತಿನ ಮಾತುಕತೆ ನಡೆದಿತ್ತು.
ನಮ್ಮ ಬೇಡಿಕೆಗಳು ಈಡೇರಿಕೆಯಾಗದಿದ್ದರೆ, ಸರ್ಕಾರದ ಅಧಿಕೃತ ಪರೇಡ್ ಗೆ ತೊಂದರೆಯಾಗದಂತೆ ಗಣರಾಜ್ಯೋತ್ಸವ ಆಚರಿಸಲು ನಾವು ರಾಜಧಾನಿ ಪ್ರವೇಶಿಸಲಿದ್ದೇವೆ ಎಂದಿದ್ದಾರೆ ಅನ್ನದಾತರು.
PublicNext
08/01/2021 07:44 am