ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಗಣರಾಜ್ಯೋತ್ಸವ ದಿನದಂದು ಹಿಂಸಾತ್ಮಕ ತಿರುವು ಪಡೆದುಕೊಂಡಿತ್ತು. ಸದ್ಯ ಅಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 200 ಮಂದಿಯ ಭಾವಚಿತ್ರಗಳನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದೆಹಲಿಯಲ್ಲಿ ಜನವರಿ 26ರಂದು ನಡೆದ ಟ್ರ್ಯಾಕ್ಟರ್ rallyಗೆ ಸಂಬಂಧಿಸಿದಂತೆ ಎಲ್ಲ ವಿಡಿಯೊಗಳು ಮತ್ತು ಚಿತ್ರಗಳನ್ನು ಪರಿಶೀಲಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಭಾವಚಿತ್ರದಲ್ಲಿ ಇರುವವರನ್ನು ಗುರುತಿಸುವ ಕಾರ್ಯ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಿದ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿತ್ತು.
PublicNext
20/02/2021 08:23 am