ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 15 ತಿಂಗಳಿಂದ ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ಡಿಸೆಂಬರ್ 11ರಂದು, ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ 15ರಂದು ಮತ್ತೊಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ. ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸುವುದಾಗಿ ತಿಳಿಸಿದೆ.
ಕೃಷಿ ಕಾಯ್ದೆಗಳನ್ನು ಹಿಂಪಡೆದ ನಂತರ ಕೇಂದ್ರ ಸರ್ಕಾರವೂ ತಮ್ಮ ಮುಂದೆ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಅದನ್ನು ರೈತರು ಒಪ್ಪಿಕೊಂಡಿದ್ದಾರೆ. ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತ ಭರವಸೆ ನೀಡಿದೆ.
PublicNext
09/12/2021 05:11 pm