ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಸಿರುವ ಪಟಾಕಿ ಮಾರಲು 10 ದಿನ ಅವಕಾಶ: ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಮಧ್ಯೆಯೂ ಹಬ್ಬ ಆಚರಿಸಲು ಸರ್ಕಾರ ಅನುಮತಿ ಕೊಟ್ಟಿದೆ. ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಎಲ್ಲರೂ ಹಬ್ಬ ಸಂಭ್ರಮಿಸುವಂತೆ ಸರ್ಕಾರ ತಿಳಿಸಿದೆ.

ಇದರ ನಡುವೆ ಹಸಿರುಪಟಾಕಿ ಮಾರಲು ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ ಮಾರಾಟಕ್ಕೆ 10 ದಿನ ಅವಕಾಶ ಮಾತ್ರ ನೀಡಿದೆ.

ಈ ಕುರಿತು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಕೋವಿಡ್-19 ಶಿಷ್ಟಾಚಾರದ ಮಧ್ಯೆ, ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶವಿದೆ.

ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ಕೊಟ್ಟಿದೆ.

ಪಟಾಕಿ ಮಾರಾಟಗಾರರು ಮಾರಾಟ ಮಾಡುವ ಸ್ಥಳದಲ್ಲಿ ಸಾಕಷ್ಟು ಗಾಳಿ ಬೆಳಕು ಹೊಂದಿರಬೇಕು, ಅಂಗಡಿಯನ್ನು ಪ್ರತಿದಿನ ಸ್ಯಾನಿಟೈಸ್ ಮಾಡುತ್ತಿರಬೇಕು, ಥರ್ಮಲ್ ಸ್ಕ್ರೀನಿಂಗ್ ಮತ್ತು ಗ್ರಾಹಕರಿಗೆ ಕೈಯನ್ನು ಸ್ಯಾನಿಟೈಸ್ ಮಾಡಿಕೊಳ್ಳುವ ವ್ಯವಸ್ಥೆ ಇಟ್ಟಿರಬೇಕು.

ಮಾರಾಟಗಾರರು ಮತ್ತು ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಪಟಾಕಿ ಮಾರುವ ಅಂಗಡಿಗಳ ಮಧ್ಯೆ ಕನಿಷ್ಠ 6 ಮೀಟರ್ ಅಂತರವಿರಬೇಕು ಎಂದು ನಿಯಮ ಹೇಳುತ್ತದೆ.

ಇದಕ್ಕಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಸ್ತೃತ ವರದಿಯನ್ನು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.

ಪರವಾನಗಿ ನೀಡುವ ಅಧಿಕಾರಿಗಳು ಮತ್ತು ಗ್ರಾಹಕರು ಅನುಮೋದನೆ ಪಡೆದ ಪಟಾಕಿಗಳನ್ನು ಖಚಿತಪಡಿಸಿಕೊಳ್ಳಲು ಈ ವರ್ಷ ತಂತ್ರಜ್ಞಾನ-ನೆರವಿನ ಕ್ರಮಗಳನ್ನು ಪರಿಚಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

08/11/2020 10:25 am

Cinque Terre

74.54 K

Cinque Terre

2

ಸಂಬಂಧಿತ ಸುದ್ದಿ